LIVE TV StateNationalPoliticsCrimeEntertainmentSportsEducationFINANCE & TAXATION
Districts

ಸ್ವಸ್ಥ ನಾರಿ-ಸಶಕ್ತ ಪರಿವಾರ ಅಭಿಯಾನ

ಮಹಿಳೆಯರ ಆರೋಗ್ಯದ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ಪಡೆಯಿರಿ:ಡಾ ನಾಗಲಕ್ಷ್ಮಿ ಚೌಧರಿ.

 

ರಾಯಚೂರು: ಮಹಿಳೆಯರು ತಮ್ಮ ಆರೋಗ್ಯದ ಖಾಳಜಿಯನ್ನು ವಹಿಸಿಕೊಳ್ಳಲು ಮುಂದಾಗುವ ಜೊತೆಗೆ ಸರಕಾರದಡಿಯ ಆರೋಗ್ಯ  ಸೌಲಭ್ಯಗಳನ್ನು ಪಡೆಯುವ ಮೂಲಕ ಕುಟುಂಬದ ಬೆಳಕಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಡಾ ನಾಗಲಕ್ಷ್ಮಿ ಚೌಧರಿ ವಿನಂತಿಸಿದರು.



ರಾಯಚೂರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎಮ್‌ಸಿಹೆಚ್‌ ಆಸ್ಪತ್ರೆ ಸಹಯೋಗದೊಂದಿಗೆ ಸ್ವಸ್ಥ ನಾರಿ-ಸಶಕ್ತ ಪರಿವಾರ ಅಭಿಯಾನದ ಜಿಲ್ಲಾ ಮಟ್ಟದ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ  ಆಕ್ಟೋಬರ್ 2ನೇಯ ತಾರೀಖಿನವರೆಗೆ ಜಿಲ್ಲೆಯ ಎಲ್ಲ ತಾಲೂಕಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರಿಮ್ಸ್‌ ಆಸ್ಪತ್ರೆಯ ತಜ್ಞರೊಂದಿಗೆ ಮಹಿಳೆಯರಿಗಾಗಿ ವೈದ್ಯಕೀಯ ಪರೀಕ್ಷೆ ಮತ್ತು ಆರೋಗ್ಯ ಸೇವೆಗಳನ್ನು ವಿಶೇಷವಾಗಿ ಕಿವಿ, ಕಣ್ಣು, ಮೂಗು, ಗಂಟಲು, ರಕ್ತದೊತ್ತಡ, ಮಧುಮೇಹ ಮತ್ತು ದಂತ ಪರೀಕ್ಷೆ, ಕ್ಯಾನ್ಸರ್, ಬಾಯಿ, ಸ್ತನ, ಗರ್ಭಾಶಯ ಪರೀಕ್ಷೆ, ಗರ್ಭಿಣಿ ಮಹಿಳೆಯರಿಗಾಗಿ ಪ್ರಸವಪೂರ್ವ ಪರೀಕ್ಷೆ, ಲಸಿಕೆ ಸೇವೆಗಳು, ರಕ್ತಹೀನತೆ ಪರೀಕ್ಷೆ ಕೈಗೊಳ್ಳಲಾಗುತ್ತಿದೆ ಅಲ್ಲದೆ ಶಿಬಿರದಲ್ಲಿ ರಕ್ತದಾನ ಶಿಬಿರ,

ಕ್ಷಯರೋಗಿಗಳಿಗೆ ನಿಕ್ಷಯ್ ಮಿತ್ರ ಸ್ವಯಂ ಸೇವಕರ ನೋಂದಣಿ ಮಾಡಿ ಪೌಷ್ಟಿಕಾಹಾರ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.



ಅಲ್ಲದೆ ಟೆಲಿಮನಸ್‌ ಉಚಿತ 14416 ಮೂಲಕ ಮಾನಸಿಕ ಸೇವೆ ಸೌಲಭ್ಯ ಹಾಗೂ ಕ್ಷಯರೋಗ ಪರೀಕ್ಷೆ, ಇದರ ಜೊತೆಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ನೋಂದಣಿ, ಪೋಷಣ್‌ ಟ್ರ್ಯಾಕ್‌ನಲ್ಲಿ ನೋಂದಣಿ ಮಾಡಲು ವ್ಯವಸ್ಥೆ ಮಾಡಲಾಗಿದ್ದು ಇದರ ಸದುಪಯೋಗ ಪಡೆಯಲು ವಿನಂತಿಸಿದರು.

 

ಇದೆ ವೇಳೆ ವಸ್ತು ಪ್ರದರ್ಶನ ಮಳಿಗೆಗೆ ಚಾಲನೆ ನೀಡಿ ಲಸಿಕೆ, ಕಿಲ್ಕಾರಿ, ಡೆಂಗ್ಯು, ಕ್ಷಯ, ಕುಷ್ಠ, ಋತುಚಕ್ರದ ಸ್ವಚ್ಛತೆ ಮತ್ತು ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸುವ ಮಾದರಿಗಳನ್ನು ವಿಕ್ಷಿಸಿದರು.

ಸೇಲ್ಪಿ ಸ್ಟ್ಯಾಂಡಿಯಲ್ಲಿ ಗರ್ಭಿಣಿ ಮಹಿಳೆಯೊಂದಿಗೆ ಸ್ವತಃ ಭಾಗವಹಿಸಿ ಎಲ್ಲ ಗರ್ಭಿಣಿಯರು ಟಿಡಿ ಲಸಿಕೆ, ತಮ್ಮ ಮಕ್ಕಳಿಗೆ 12 ಮಾರಕ ರೋಗಗಳ ತಡೆಗೆ ತಪ್ಪದೆ ಲಸಿಕೆ ಹಾಕಿಸಲು ವಿನಂತಿಸಿದರು.



ಈ ಸಂದರ್ಬದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರಬಾಬು, ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನವೀನ್‌ಕುಮಾರ್‌, ಮುಖಂಡರಾದ ಶ್ರೀದೇವಿ ನಾಯಕ್‌, ಶ್ರೀದೇವಿ ಶ್ರೀನಿವಾಸ್‌, ಈರಮ್ಮ ಗುಂಜಳ್ಳಿ, ಮಂಜುಳಾ ಅಮರೇಶ, ವಂದನಾ ಶಿವಕುಮಾರ್‌, ಪ್ರತೀಭಾರೆಡ್ಡಿ, ಲಕ್ಷ್ಮಿ ಹಾಗೂ  ಜಿಲ್ಲಾ ನಿರೂಪಣಾಧಿಕಾರಿ ಕುಮಾರ್‌, ಜಿಲ್ಲಾ ಆರ್‌ಸಿಹೆಚ್‌ ಅಧಿಕಾರಿ ಡಾ ನಂದಿತಾ.ಎಮ್‌ಎನ್‌, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ ಗಣೇಶ್‌, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಶಾಕೀರ್‌, ಎಮ್‌ಸಿಎಚ್‌ ಆಡಳಿತ ಅಧಿಕಾರಿ ಡಾ ಪ್ರಜ್ವಲ್‌ಕುಮಾರ‌, ಶಿಶು ಅಭಿವೃದ್ದಿ ಯೋಜನಾಧಿಕಾರಿ ವೇಂಕಟೇಶ ದೇಸಾಯಿ, ತಾಲೂಕಾ ಆರೋಗ್ಯಾಧಿಕಾರಿ ಡಾ ಪರಹಾ ನಸ್ರೀನ್‌ ಖಾಜೀ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್‌ ದಾಸಪ್ಪನವರ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸ್ಸಯ್ಯ, ಡಾ ಸ್ವೇತಾಂಬರಿ,  ಸೇರಿದಂತೆ  ಸಿಬ್ಬಂದಿಯವರು ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ