LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

2028ಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ

ನಾಯಕನಹಟ್ಟಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಭದ್ರವಾಗಿದೆ, 2028ಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಮಾದ್ಯಮ ವಕ್ತರ ಬಾಲಕೃಷ್ಣಸ್ವಾಮಿ ಯಾದವ್ ಭವಿಷ್ಯ ನುಡಿದರು.

 

ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮಕ್ಕೆ ಆಗಮಿಸಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಗೆ ಉತ್ತಮವಾದ ಆಡಳಿತವನ್ನು ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಹಿಂದುಳಿದ ವರ್ಗ ಬಡಜನರಿಗೆ ಸಾಕಷ್ಟು ಅನುಕೂಲವಾಗಿದೆ. ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ಅನುಕೂಲ ಪಡೆದಿದ್ದಾರೆ. ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಸ್ವತಂತ್ರವಾಗಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣಿಸಲು ಅನುಕೂಲವಾಗಿದೆ. ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಮಹಿಳೆಯರು ಶಕ್ತಿ ಯೋಜನೆಯಿಂದ ರಾಜ್ಯ ಸುತ್ತಿ ನಮ್ಮ ಐತಿಹಾಸಿಕ ಹಲವಾರು ದೇವಸ್ಥಾನಗಳಿಗೆ ದರ್ಶನಕ್ಕೆ ಹೋಗುತ್ತಿದ್ದಾರೆ.

ಆದ್ದರಿಂದ ಲಕ್ಷಾಂತರ ಮಹಿಳೆಯರು ರಾಜ್ಯ ಸರ್ಕಾರವನ್ನು ಕೊಂಡಾಡುತ್ತಿದ್ದಾರೆ. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಪದವಿದರ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಬೇರಿ ಬಾರಿಸಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದರು. ರಾಷ್ಟçಪಿತ ಮಹತ್ಮ ಗಾಂಧೀಜಿ ಮನರೆಗಾ ಯೋಜನೆ, ಕಾನೂನು ತಿದ್ದುಪಡಿ ಮಾಡುವ ಮೂಲಕ ವಿ.ಬಿ.ಜಿ.ರಾಮ್‌ಜಿ ಎನ್ನುವ ಯೋಜನೆಯನ್ನು ತರುವ ಮೂಲಕ ಕೇಂದ್ರ ಸರ್ಕಾರ ಗ್ರಾಮೀಣ ಜನರ, ಕಾರ್ಮಿಕರ, ಮಹಿಳೆಯರ, ಶೋಷಿತರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ ಎಂದು ಆರೋಪಿಸಿದರು. ದೇಶಾದಂತ್ಯ ಮನರೆಗಾ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರಕಿ ಅವರ ದುಡಿಮೆಯ ಹಣ ನೇರವಾಗಿ ಸಂದಾಯವಾಗುತ್ತಿತ್ತು. ಆದರೆ ಕೇಂದ್ರ ಸರ್ಕಾರದ ವಿ.ಬಿ.ಜಿ.ರಾಮ್‌ಜಿ ಕಾಯ್ದೆ ಅನುಷ್ಠಾನದಿಂದ ಯೋಜನೆಯನ್ನು ಹಾಳು ಮಾಡುತ್ತಿದೆ. ಇದಕ್ಕೆ ಬಳಕೆಯಾಗುವ ಲಕ್ಷಾಂತರ ಕೋಟಿ ಹಣವನ್ನು ಶ್ರೀಮಂತರಿಗೆ ರವಾನಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ