ನಾಯಕನಹಟ್ಟಿ : ಸ್ವಾತಂತ್ರ್ಯಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿ.ಎಸ್.ಐ. ಪಾಂಡುರ0ಗಪ್ಪ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶನಿವಾರ ಧ್ವಜಾರೋಹಣ ಮಾಡುವುದರ ಮೂಲಕ ಅವರು ಮಾತನಾಡಿದರು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹಾನೀಯರನ್ನು ಸ್ಮರಿಸಬೇಕು ಮಹಾತ್ಮ ಗಾಂಧೀಜಿ, ಸರ್ದಲ್‌ವಲ್ಲಭಬಾಯಿ ಪಟೇಲ್, ಜವಹಾರ್‌ಲಾಲ್ ನೆಹರು, ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಸ್ಮರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿಪಡೆಯಿತು. ಅಹಿಂಸಾ ಹೋರಾಟದ ಮೂಲಕ ಭಾರತ ಸ್ವಾತಂತ್ರö್ಯ ಗಳಿಸಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ನಾಯಕನಹಟ್ಟಿ ಪೊಲೀಸ್‌ಠಾಣೆಯ ಸಿಬ್ಬಂದಿಗಳು ಇದ್ದರು.