22 Nov 2026, 06:19:43 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ಸಂಡೂರಿನಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

ಸಂಡೂರು :  ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ವೃತ್ತದಿಂದ  ಅಭಿಯಾನಕ್ಕೆ ಚಾಲನೆ ನೀಡಿ ತಾಲೂಕಾದ್ಯಂತ ಅಭಿಯಾನ ಮಾಡಿ ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

 

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ತಾಲೂಕಿನ ಜನರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ,ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ತಾಲೂಕಿನ ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.



ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಖಾದರಬಾಷಾ ಮಾತನಾಡಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನಾನುಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

 

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಮುಖಂಡರಾದ ಶ್ರೀನಿವಾಸ ರೆಡ್ಡಿ,ಜಿಲ್ಲಾ ಕಾರ್ಯದರ್ಶಿ ಕಟ್ಟೆ ಬಸಪ್ಪ,ರೈತ ಘಟಕದ ಜಿಲ್ಲಾಧ್ಯಕ್ಷ ಜನಾರ್ಧನ ರೆಡ್ಡಿ, ಸಂಡೂರು ತಾಲೂಕಾಧ್ಯಕ್ಷ ಮಂಜುನಾಥ್ ಗೌಳಿ,ಉಪಾಧ್ಯಕ್ಷ ಶರ್ಮಾಸ ವಲಿ,ಪ್ರಧಾನ ಕಾರ್ಯದರ್ಶಿ ರವಿ ನಾಡಿಗೇರ,ಕಾರ್ಯದರ್ಶಿಗಳಾದ ಮೆಹಬೂಬ್ ಬಾಷಾ,ಪಂಪಾಪತಿ,ರಾಮು ನಾಯಕ, ಇಮಾಮ ಬಾಷಾ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ನಾರಾಯಣ,ಕೂಡ್ಲಿಗಿ ಅಧ್ಯಕ್ಷ ಶರಣಪ್ಪ,ಲೋಕೇಶ್,ಉಪಾಧ್ಯಕ್ಷ ಮಂಜುನಾಥ್,ಮೋಹನ್, ಹುಚ್ಚುಸಾಬ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ