LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮುತ್ಸದ್ಧಿ ಎನ್. ತಿಪ್ಪಣ್ಣ ನಿಧನ, ತುರುವನೂರಲ್ಲಿ ಶನಿವಾರ ಅಂತ್ಯಸಂಸ್ಕಾರ

ಬಳ್ಳಾರಿ :    ಹಿರಿಯ ನ್ಯಾಯವಾದಿಗಳು, ವಿಧಾನಪರಿಷತ್ತಿನ ಮಾಜಿ ಸದಸ್ಯರು, ವಿಧಾನಪರಿಷತ್ತಿನ ಸಭಾಧ್ಯಕ್ಷರು, ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರು, ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಮಾಜಿ ಅಧ್ಯಕ್ಷರು, ಜನತಾದಳ (ಎಸ್)ನ ಮುಖಂಡರೂ ಆಗಿದ್ದ ಮುತ್ಸದ್ಧಿ ಎನ್. ತಿಪ್ಪಣ್ಣ (97) ಅವರು ಶುಕ್ರವಾರ ನಸುಕಿನಲ್ಲಿ ದೈವಾದೀನರಾಗಿದ್ದಾರೆ.

 

ವೀರಶೈವ ಸಮಾಜದ ದೊಡ್ಡ ಆಸ್ತಿ ಆಗಿದ್ದ ಎನ್. ತಿಪ್ಪಣ್ಣ ಅವರು, ಯುವ ವಕೀಲರಿಗೆ ಮಾರ್ಗದರ್ಶಕರಾಗಿ, ವೃತ್ತಿಯಲ್ಲಿ ಆದರ್ಶ - ವೃತ್ತಿಪರತೆ ಮತ್ತು ಬದ್ಧತೆಗಳನ್ನು ಹೊಂದುವ ಕುರಿತು ಸದಾಕಾಲ ಆದರ್ಶರಾಗಿದ್ದರು.

 

ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದ ಎನ್. ತಿಪ್ಪಣ್ಣ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ಬಳ್ಳಾರಿಯ ಸುಕೃತ ನರ್ಸಿಂಗ್ ಪಕ್ಕದ ಮನೆಯಲ್ಲಿ ಶನಿವಾರ ನಸುಕಿನ 6 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ.



ಮೃತರ ಅಂತಿಮ ಸಂಸ್ಕಾರವು ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಅವರ ಹುಟ್ಟೂರಾದ ಚಿತ್ರದುರ್ಗ ಜಿಲ್ಲೆಯ ತುರುವನೂರಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ