22 Nov 2026, 06:11:22 PM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts

ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಹೇಳಿಕೆ

ಬಳ್ಳಾರಿ : ಸಮಾಜದಲ್ಲಿನ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.



ಪ್ರತಿಯೊಂದು ಸಮುದಾಯಗಳು ಸಂಘಟಿತರಾಗಬೇಕು. ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುನ್ನೆಲೆಗೆ ಬರಬೇಕು. ಇದಕ್ಕಿರುವ ಮಾರ್ಗವೆಂದರೆ ಅದು ಶಿಕ್ಷಣ, ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ತಮ್ಮ ಮಕ್ಕಳಿಗೂ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.

ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಎನ್ನುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಹಿಂದುಳಿದ ಜನರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಹಿಂದುಳಿದ ಸಮಾಜದವರನ್ನು ಜಾಗೃತಗೊಳಿಸಲು ಸರ್ಕಾರ ಜಯಂತಿ ಕಾರ್ಯಕ್ರಮಗಳನ್ನು ಸಹ ಆಚರಿಸುತ್ತಿದೆ ಎಂದು ತಿಳಿಸಿದರು.

ಸವಿತಾ ಸಮಾಜವು ಎಲ್ಲ ವರ್ಗದ ಜನರಿಗೂ ತಾರತಮ್ಯವಿಲ್ಲದೆ ಸೇವೆ ನೀಡುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಮತ್ತಷ್ಟು ಸದೃಢವಾಗಬೇಕಿದೆ. ಪ್ರತಿಯೊಬ್ಬರೂ ತಾನು ಮಾಡುವ ಕಸುಬಿನ ಮೇಲೆ ಗೌರವ, ನಿಷ್ಠೆ ಇಟ್ಟುಕೊಂಡಾಗ ಬದುಕಿನಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.



ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ನಾವೀನ್ಯ ವಿಭಾಗದ ಡೀನ್ ಡಾ.ಮಂಜುನಾಥ.ಎಸ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಶಿವನ ದಿವ್ಯ ದೃಷ್ಠಿಯಲ್ಲಿ ಜನ್ಮ ತಾಳಿದವರು ಸವಿತಾ ಮಹರ್ಷಿ. ಪೌರಾಣಿಕ ವ್ಯಕ್ತಿಯಾದ ಸವಿತಾ ಮಹರ್ಷಿಯು ರಥಸಮ್ತಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದವರು. ಧಾರ್ಮಿಕವಾಗಿ ಶಿವನ ಎಡಗಣ್ಣನ್ನು ಚಂದ್ರನಿಗೆ ಬಲಗಣ್ಣನ್ನು ಸೂರ್ಯನಿಗೆ ಹೋಲಿಸಲಾಗುತ್ತದೆ. ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂಬುದು ಪ್ರತಿಥಿ ಇದೆ. ಇವರ ಮಗಳಾದ ಗಾಯತ್ರಿದೇವಿಯು ಶ್ರೇಷ್ಠ ಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. ಈ ಸಮಾಜಕ್ಕೆ 2000 ಸಾವಿರ ವರ್ಷಗಳ ಇತಿಹಾಸವಿದೆ ಎಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಮಟ್ಟದಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿರುಗುಪ್ಪ ತಾಲ್ಲೂಕಿನ ರಾರಾವಿಯ ಬಿ.ಚಿದಾನಂದ ಗವಾಯಿ ತಂಡ ಭಕ್ತಿ ಸಂಗೀತ ಪ್ರಸ್ತುತಪಡಿಸಿದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



ಸಂಭ್ರಮದ ಮೆರವಣಿಗೆ:

ಸವಿತಾ ಮಹರ್ಷಿ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಂಭ್ರಮದಿಂದ ನಡೆಯಿತು. ಮೆರವಣಿಗೆಗೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಕಳಸ ಹಿಡಿದ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.

ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ  ಮುನಿಸಿಪಲ್ ಕಾಲೇಜ್ ಮೈದಾನದಿಂದ ಆರಂಭವಾಗಿ  ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿ ಕಚೇರಿ ರಸ್ತೆ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ