11 Nov 2026, 12:27:38 AM|
Gold₹14266/gGold24K ₹14,266/g - 22K ₹13,065/gTap for full details
Press ID & Credential Portal
Apply / Verify  ➔
LIVE TV StateNationalPoliticsCrimeEntertainmentSportsEducationFINANCE & TAXATION
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

‘ಸುಮಾ' ಚಲನಚಿತ್ರ ಅ.2 ರಂದು ತೆರೆಗೆ

ಬೆಂಗಳೂರು: ‘ಓಂ ಸಾಯಿ ಸಿನೆಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ಮಹಿಳಾ ಪ್ರಧಾನ ಕಥಾ ಹಂದರದ ‘ಸುಮಾ’ ಕನ್ನಡ ಚಲನಚಿತ್ರ ಅಕ್ಟೋಬರ್ 2 ರಂದು ತೆರೆಗೆ ಬರುತ್ತಿದೆ. ಸಾಮಾನ್ಯವಾಗಿ ಬಹುತೇಕ ಸಿನಿಮಾಗಳ ಟ್ರೇಲರ್ ಅನ್ನು ಸೆಲೆಬ್ರಿಟಿಗಳು ಅಥವಾ ಗಣ್ಯರ ಕೈಯಲ್ಲಿ ಬಿಡುಗಡೆ ಮಾಡಿಸುವುದು ಚಿತ್ರರಂಗದಲ್ಲಿರುವ ವಾಡಿಕೆ. ಆದರೆ ಇದಕ್ಕೆ  ಅಪವಾದ ಎಂಬಂತೆ ‘ಸುಮಾ' ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು  ನಿರಾಶ್ರಿತರು ಮತ್ತು ಬಡವರ ಕೈಯಲ್ಲಿ ಬಿಡುಗಡೆ ಮಾಡಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಈ ಹಿಂದೆ ಕನ್ನಡದಲ್ಲಿ ‘ಶ್ರೀಕಬ್ಬಾಳಮ್ಮನ ಮಹಿಮೆ’, ‘ಮನೆ’, ‘ಬ್ಯಾಂಕ್ ಲೋನ್’, ‘ಸುಳಿ’ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ರಶ್ಮಿ  ಎಸ್.(ಸಾಯಿರಶ್ಮಿ) ‘ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

news_1790710036_0_811.webp

 

‘ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ‘ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಸಂಪೂರ್ಣ ಅರಳಿಯೂ ಇರದಂತಹ ಹೂವು. ಮಂಡ್ಯ, ಮದ್ದೂರು, ಆಲಭುಜನಹಳ್ಳಿ, ಕೆ. ಎಂ ದೊಡ್ಡಿ, ನಗರಕೆರೆ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಅಕ್ಟೋಬರ್ 2 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ. ಪ್ರೇಕ್ಷಕರು ‘ಸುಮಾ’ ನೋಡಿ ಪ್ರೋತ್ಸಾಹಿಸಬೇಕೆಂದು ನಿರ್ದೇಶಕಿ ರಶ್ಮಿ.ಎಸ್ ಹೇಳಿದರು.

ಮೈಸೂರು ಮೂಲದ ಪ್ರದೀಪ್ ಗೌಡ ನಾಯಕರಾಗಿದ್ದು ಉಳಿದಂತೆ ಬಾಲರಾಜವಾಡಿ, ಜೋ ಸೈಮನ್, ವಿಜಯಲಕ್ಷ್ಮಿ ಉಪಾಧ್ಯಾಯ, ಮುರಳೀಧರ್ ಡಿ. ಆರ್, ಕಾವ್ಯ ಪ್ರಕಾಶ್, ಪವಿತ್ರ, ಅವಿನಾಶ್ ಗಂಜಿಹಾಳ, ಕುಮಾರಿ ಭೈರವಿ, ಸಿದ್ದು ಮಂಡ್ಯ, ಶಿವಕುಮಾರ್ ಆರಾಧ್ಯ, ಹರಿಹರನ್ ಬಿ. ಪಿ, ವಿಶೇಷ ಪಾತ್ರದಲ್ಲಿ ಡಾ. ವಿ ನಾಗೇಂದ್ರ ಪ್ರಸಾದ್ ಅಭಿನಯಿಸಿದ್ದಾರೆ. ದೇವೂ ಛಾಯಾಗ್ರಹಣ, ವೇದಾಂತ್ ಅತಿಶಯ್ ಜೈನ್ ಸಂಗೀತ, ಸಾಹಿತ್ಯ ಪ್ರದೀಪಗೌಡ, ಸತೀಶ ಜೋಶಿ, ಮುತ್ತುರಾಜ್ ಟಿ ಸಂಕಲನ, ಡಿ.ಐ ಗಗನ್ ಆರ್, ಕಾರ್ತಿಕ್ ಸುಧನ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಪತ್ರಿಕಾಸಂಪರ್ಕ, ಸಹ ನಿರ್ಮಾಪಕರು ರಂಗಸ್ವಾಮಿ ಟಿ(ರವಿಗೌಡ), ನಿರ್ಮಾಣ ನಿರ್ವಹಣೆ ಹರಿಹರನ್, ಬಿ.ಪಿ, ಪ್ರಚಾರ ಕಲೆ ತುಳಸಿರಾಮ್ ರಾಜು ಚಿತ್ರಕ್ಕಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ