LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮೂರು ಕರಡಿಗಳ ಯಶಸ್ವಿ ಸೆರೆ

ಬಳ್ಳಾರಿ : ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಕಳೆದ ಹತ್ತು ತಿಂಗಳಿನಿAದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ‘ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್' ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.

https://youtu.be/3tu5Kyh52EI

ಕಳೆದ ಸುಮಾರು 10 ತಿಂಗಳಿನಿಂದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ. ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.
ಎಸಿಎಫ್ ಶರಣ್ ಕುಮಾರ್, ಆರ್‌ಎಫ್‌ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್‌ಎಫ್‌ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್‌ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇವರಿಗೆ ಪಶುವೈದ್ಯರಾದ ಡಾ. ಪ್ರಕೃತಿ ಹಾಗೂ ವೈಲ್ಡ್ ಲೈಫ್ ಎಸ್‌ಒಎಸ್ ಎನ್‌ಜಿಒ ಸಂಸ್ಥೆಯವರು ಸಾಥ್ ನೀಡಿದ್ದರು.


ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ‘ರೇಡಿಯೋ ಕಾಲರ್' ಅಳವಡಿಸಲಾಗಿದೆ. ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ