LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೀಟನಾಶಕ ಇರುವ ತರಕಾರಿ ಸೇವಿಸಿ ಒಂದೇ ಕುಟುಂಬದ ಮೂವರು ಸಾವು

ರಾತ್ರಿ ಊಟ ಸೇವೀಸಿ, ಹೊಟ್ಟೆನೋವು ಕಾಣಿಸಿಕೊಂಡು ತಂದೆ, ಮಗಳು ಸಾವು

ಕವಿತಾಳ: ಪಟ್ಟಣ ಸಮೀಪದ ಚಿಂಚರಿಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ. ತಿಮ್ಮಾಪುರ್ ಗ್ರಾಮದಲ್ಲಿ ಕೀಟನಾಶಕವನ್ನು ಒಳಗೊಂಡಿರುವ ತರಕಾರಿ ಸೇವಿಸಿ ಒಂದೇ ಕುಟುಂಬದ ಮೂವರೂ ಸಾವನ್ನುಪ್ಪಿರುವ ಘಟನೆ ನಡೆದಿದೆ.

ಕಳೆದ ರಾತ್ರಿ ರೊಟ್ಟಿ, ಚವಳೆಕಾಯಿ ಪಲ್ಯ, ಅನ್ನ, ಸಾಂಬಾರ್ ಸೇವಿಸಿದ್ದ ಕುಟುಂಬದ ಸದಸ್ಯರಲ್ಲಿ ತಂದೆ ರಮೇಶ(35),  ಮಗಳು ನಾಗಮ್ಮ(8), ದೀಪಾ( 6) ಸಾವನ್ನಪ್ಪಿದ್ದಾರೆ. ಉಳಿದಂತೆ ಅಸ್ವಸ್ಥಗೊಂಡಿದ್ದ ಮೂರು ಮಕ್ಕಳು, ಪತ್ನಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪತ್ನಿ ಪದ್ಮಾವತಿ(34) ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಪದ್ಮಾವತಿಯನ್ನು ನಗರದ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.



ಕೃಷ್ಣ, ಚೈತ್ರ ಎಂಬ ಮತ್ತಿಬ್ಬರು ಮಕ್ಕಳನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಊಟ ಮಾಡಿ ಮಲಗಿದ ಕೆಲವೇ ಕ್ಷಣಗಳಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಕುಟುಂಬದ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ತಂದೆ ರಮೇಶ್, ಮಗಳು ನಾಗಮ್ಮ ಸಾವನ್ನಪ್ಪಿದ್ದರು.

ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ