LIVE TV StateNationalPoliticsCrimeEntertainmentSportsEducationFINANCE & TAXATION
Districts Bellary | Crime News

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಸಾವಿಗೆ ಶರಣು

ಪತಿಯ ಕಿರುಕುಳವೇ ಕಾರಣ : ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬಳ್ಳಾರಿ: ನಗರದ ಮಿಲ್ಲರ್‌ಪೇಟೆಯ ಕವಿತಾ ಐಸ್ ಫ್ಯಾಕ್ಟರಿ ಬಳಿಯ ನಿವಾಸಿ ಸದ್ದಾಂ ಹುಸೇನ್ ಅವರ ಪತ್ನಿ ಲತೀಫಾ ಸಿಮ್ರಾನ್ (29) ತನ್ನ ಇಬ್ಬರು ಮಕ್ಕಳೊಂದಿಗೆ ಮಂಗಳವಾರ ಬೆಳಗ್ಗೆ ಅಲ್ಲೀಪುರ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ

ಲತೀಫಾ ಸಿಮ್ರಾನ್ ತನ್ನ ಪುತ್ರ ಮಹಮ್ಮದ್ ಅಯಾನ್ (3) ಮತ್ತು ಪುತ್ರಿ ಆಯಿಷಾ ಫಾತಿಮಾ 2ವರ್ಷ ಅವರೊಂದಿಗೆ  ಮಂಗಳವಾರ ಬೆಳಿಗ್ಗೆ 9.30ರ ಸುಮಾರಿಗೆ ಅಲ್ಲಿಪುರ ಕಾಲುವೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಂದು ಮೃತ ಪಟ್ಟ ಮಹಿಳೆಯ ತಾಯಿ ಆಯಿಷಾ ಪರ್ವೀನ್  ತಿಳಿಸಿದ್ದಾರೆ

ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಟುಂಬದಲ್ಲಿ ಉಂಟಾಗಿದ್ದ ಕೌಟುಂಬಿಕ ಕಲಹವೇ ಘಟನೆಗೆ ಕಾರಣವೇ ಎಂಬ ಬಗ್ಗೆ ತನಿಖೆಯಿಂದ ಸ್ಪಷ್ಟವಾಗಬೇಕಿದೆ.

news_1791915959_0_707.webp

 

ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಪ್ರಕಾರ, ಸದ್ದಾಂ ಹುಸೇನ್ ಬೇರೆ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದು, ಆಕೆಗೆ ಹೊಸ ಮನೆ ನಿರ್ಮಿಸಲು ಮುಂದಾಗಿದ್ದರು ಎನ್ನಲಾಗಿದೆ. ಮನೆ ನಿರ್ಮಾಣಕ್ಕೆ ₹10 ಲಕ್ಷ ಹಣದ ಅಗತ್ಯವಿದೆ ಎಂದು ಪತ್ನಿಗೆ ಹೇಳಿ, ಪ್ರತಿದಿನ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಅಲ್ಲದೆ, ಮಗಳ ಮದುವೆ ಸಂದರ್ಭದಲ್ಲಿ ನೀಡಲಾಗಿದ್ದ 15 ತೊಲೆ ಚಿನ್ನಾಭರಣವನ್ನು ಮಾರಾಟ ಮಾಡಿದ್ದರೆಂಬ ಆರೋಪವೂ ಕೇಳಿಬಂದಿದೆ.

 

ಕುಟುಂಬದಲ್ಲಿ ನಡೆದಿದ್ದ ಎನ್ನಲಾದ ಕೌಟುಂಬಿಕ ಕಲಹ, ಹಣಕಾಸಿನ ಒತ್ತಡ ಹಾಗೂ ಪತ್ನಿಗೆ ನೀಡಲಾಗುತ್ತಿತ್ತು ಎನ್ನಲಾದ ಕಿರುಕುಳದ ಆರೋಪಗಳು ಪ್ರಕರಣದಲ್ಲಿ ಮಹತ್ವ ಪಡೆದಿವೆ. ಆದರೆ, ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ