LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ತುಂಗಾಭದ್ರಾ  ಜಲಾಶಯ ಭರ್ತಿ:  ಪ್ರವಾಸಿಗರಲ್ಲಿ ಪುಳಕ

ಬಳ್ಳಾರಿ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತುಂಗಭದ್ರಾ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, 22 ಗೇಟ್ ಗಳ ಮೂಲಕ ನದಿಗೆ ನೀರು ಹರಿಬಿಡಲಾಗಿದೆ.

ಹೆಚ್ಚುವರಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಜಲಾಶಯ ಭಾಗದಲ್ಲಿ ಹರಿಯುತ್ತಿರುವ ನೀರು ನೋಡುವುದು ಸೌಭಾಗ್ಯವಾಗಿದೆ. ಜಲಾಶಯದ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಹರಿಯುತ್ತಿರುವ ನೀರು ನೋಡಿ ಪ್ರವಾಸಿಗರು ಪುಳಕಗೊಂಡಿದ್ದಾರೆ.

[caption id="attachment_24362" align="alignnone" width="2048"] default[/caption]

ಪ್ರವಾಸಿಗ ಉಮೇಶ್ ಮಾತನಾಡಿ, ತುಂಗಭದ್ರಾ ಜಲಾಶಯ ಹಳೆಯ ಜಲಾಶಯವಾಗಿದ್ದು, ಈ ವರ್ಷ 80 ಟಿಎಂಸಿ ನೀರು ಸಂಗ್ರಹಿಸಲು ತಿರ್ಮಾನಿಸಿದ್ದರಿಂದ ನದಿಗೆ ಬೇಗ ನೀರು ಹರಿಬಿಡಲಾಗಿದೆ ಎಂದು ಹೇಳಿದರು.

ಅಣುವೀರಯ್ಯ ಎಂಬುವರು ಮಾತನಾಡಿ, ನದಿಗೆ ನೀರು ಹರಿ ಬಿಟ್ಟಾಗ ತುಂಗಭದ್ರಾ ಜಲಾಶಯವನ್ನು ಬಹಳ ಹತ್ತಿರದಿಂದ ನೋಡುವ ಅವಕಾಶ ದೊರೆತಿದ್ದು, ಕುಟುಂಬದೊಂದಿಗೆ ಆಗಮಿಸಿ ಜಲಾಶಯದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದೇವೆ ಎಂದರು.

ಮಹಿಳಾ ಪ್ರವಾಸಿಗರಾದ ಜ್ಯೋತಿ ಮಾತನಾಡಿ, ಜಲಾಶಯದಿಂದ ನದಿಗೆ ನೀರು ಹರಿ ಬಿಟ್ಟಾಗ 33 ಗೇಟ್ ಗಳಿಗೆ ಅಳವಡಿಸಿದ ವಿದ್ಯುತ್ ದೀಪಾಲಂಕಾರ ಆಕರ್ಷಣೀಯವಾಗಿದ್ದು, ಅದರ ಸೊಬಗನ್ನು ಕಣ್ತುಂಬಿಕೊಳ್ಳಲು ಬಂದಿರುವುದಾಗಿ ಹೇಳಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ