LIVE TV StateNationalPoliticsCrimeEntertainmentSportsEducationFINANCE & TAXATION
Districts

ಯುಜಿಸಿಇಟಿ/ನೀಟ್: ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು : ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಎಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿ.ಎಸ್ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಆಯುಷ್ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶದ ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಇದು ಒಳಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ ಆ. 26ರ ಮಧ್ಯಾಹ್ನ 1 ರವರೆಗೆ ನಮೂದಿಸಿದ್ದ ಆಪ್ಷನ್ ಗಳನ್ನು ಪರಿಗಣಿಸಲಾಗಿದೆ. ಇದು ತಾತ್ಕಾಲಿಕ ಹಂಚಿಕೆಯಾಗಿರುವುದರಿಂದ ಅಭ್ಯರ್ಥಿಗಳು  ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



ಈ ತಾತ್ಕಾಲಿಕ ಸೀಟು ಹಂಚಿಕೆ ಸಂಬಂಧ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ ಆ. 30ರ ಮಧ್ಯಾಹ್ನ 1ರೊಳಗೆ [email protected] ಗೆ ಎಲ್ಲಾ ವಿವರಗಳೊಂದಿಗೆ ಮೇಲ್ ಮಾಡಲು ಅವರು ಸೂಚಿಸಿದ್ದಾರೆ.

ವೈದ್ಯಕೀಯ, ವೈದ್ಯಕೀಯ ಕೋರ್ಸುಗಳಿಗೆ ಪ್ರಾಧಿಕಾರದಲ್ಲಿ ಎರಡನೇ ಸುತ್ತಿನಲ್ಲಿ ತಾತ್ಕಾಲಿಕವಾಗಿ ಸೀಟು ಹಂಚಿಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಸದ್ಯ ಯಾವುದೇ ಕ್ರಮ ವಹಿಸಬಾರದು ಎಂದೂ ಸೂಚಿಸಲಾಗಿದೆ. ಎಂಸಿಸಿ ವೇಳಾಪಟ್ಟಿ ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಪರಿಷ್ಕೃತ ಮಾಹಿತಿಗಾಗಿ ನಿಯಮಿತವಾಗಿ ವೆಬ್ ಸೈಟ್ ಗಮನಿಸುತ್ತಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ