ಸುರಪುರ : ನೂತನ ರಾಜ್ಯ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರಾಜಶೇಖರ ಗೌಡ ಪಾಟೀಲ ವಜ್ಜಲ ರವರನ್ನು ಕಚಕನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಹಳ್ಳಿ,ಕಚಕನೂರ, ಬೆನಕನಹಳ್ಳಿ, ಕೆ. ತಳ್ಳಳ್ಳಿ, ಹಾಗೂ ಬಾಚಿಮಟ್ಟಿ ಗ್ರಾಮದ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಐದು ಹಳ್ಳಿಗಳ ರೆಡ್ಡಿ ಸಮಾಜದ ಮುಖಂಡರು ಸೇರಿದಂತೆ ಇತರರು ಇದ್ದರು.