LIVE TV StateNationalPoliticsCrimeEntertainmentSportsEducationFINANCE & TAXATION
Districts

ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯ ಪಂಜಿನ ಮೆರವಣಿಗೆ

ಕೊಪ್ಪಳ : ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಇಂದು ನಗರದ ವಾಲ್ಮೀಕಿ ಭವನದಿಂದ ಅಶೋಕ ವೃತ್ತದ ವರೆಗೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ವಾಲ್ಮೀಕಿ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿದ ಬೆಳಗಾವಿ ಮಾಜಿ ಸಂಸದ ರಮೇಶ್ ಕತ್ತಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯದ ಮುಖಂಡ ಟಿ. ರತ್ನಾಕರ ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ, ಸದಾ ಹೋರಾಟದ ಬದುಕನ್ನು ಸಾಗಿಸುವ, ಶಾಂತಿ ಸೌಹಾರ್ದಕ್ಕೆ ಹೆಸರಾಗಿರುವ ವಾಲ್ಮೀಕಿ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ದಂಗೆ ಏಳುವಂತೆ ಮಾಡುತ್ತಿದ್ದಾರೆ ಇದು ಅಕ್ಷಮ್ಯ ಅಪರಾಧ. ಕೂಡಲೇ ಸರ್ಕಾರ ಅವರನ್ನು ಬಂಧಿಸಬೇಕು ಇಲ್ಲವಾದಲ್ಲಿ ತೀವ್ರ ಸ್ವರೂಪದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.



ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ಅಧ್ಯಕ್ಷ ಡಾ. ಕೆ. ಎನ್. ಪಾಟೀಲ್, ಜಿಲ್ಲಾ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ರಾಮಣ್ಣ ಕಲ್ಲನವರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಮುಖಂಡರುಗಳಾದ ಬಸವರಾಜ ಶಹಪೂರ, ಮಾಜಿ ಜಿ. ಪಂ. ಸದಸ್ಯರುಗಳಾದ ಹನುಮೇಶ ನಾಯಕ ಮತ್ತು ರಾಮಣ್ಣ ಚೌಡಕಿ, ಶಿವಮೂರ್ತಿ ಗುತ್ತೂರ, ಕೊಟೇಶ ದದೇಗಲ್, ಕೆ.ಬಿ. ಗೋನಾಳ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ, ರಾಮಣ್ಣ ಬೆಳವಿನಾಳ, ಶಾಂತಪ್ಪ ಬೆಳವಿನಾಳ, ಸೋನು ವದಗನಾಳ, ಶರಣಪ್ಪ ಕನಕಗಿರಿ, ಭೀಮಣ್ಣ ಹವಳೆ, ನಾಗರಾಜ ಇದ್ಲಾಪೂರ, ವಿಶಾಲಾಕ್ಷಮ್ಮ ವಾಲ್ಮೀಕಿ, ಗಂಗಮ್ಮ, ದೀಪಮ್ಮ, ಸಂತೋಷ ಗುದಗಿ, ಲಕ್ಷ್ಮಣ ಚೌಡಕಿ, ರಮೇಶ ಚೌಡಕಿ ಇತರರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ