LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

ಬಳ್ಳಾರಿ : ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.

ವಿವಿಯ ಪರೀಕ್ಷಾ ವಿಭಾಗದಲ್ಲಿ ಜರುಗಿದ ಕಾನೂನುಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ ಮತ್ತು ವಿವಿಯ ಇತಿಹಾಸ, ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅನಂತ್ ಎಲ್ ಝಂಡೇಕರ್ ಇವರು ವಿಶ್ವವಿದ್ಯಾಲಯದಲ್ಲಿನ ಸಹ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಮತ್ತು ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿನ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಚೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿಷಯ ಮಂಡಿಸಲಾಗಿದ್ದು, ಸಭೆಯು ವಿಸ್ತೃತವಾಗಿ ಚರ್ಚಿಸಿ ಈ ಪ್ರಕರಣಗಳ ಕುರಿತಂತೆ ಓರ್ವ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.



ಹಾಗಾಗಿ ಎರಡೂ ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದ್ದು, ಇವರು ಪ್ರಕರಣ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ನಂತರ ತಪ್ಪಿತಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಹಾಗೂ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ