LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಸಂಗನಕಲ್ಲು ಪ್ರಾಗೈತಿಹಾಸಿಕ ತಾಣ ವೀಕ್ಷಣೆ, ಡಿಜಿಟಲ್ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಬಳ್ಳಾರಿ:  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ–2026’ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದಿನಾಚರಣೆಯ ಅಂಗವಾಗಿ ಬೆಳಿಗ್ಗೆ ಸರಳಾದೇವಿ ಕಾಲೇಜಿನ ಇತಿಹಾಸ ಮತ್ತು ಪ್ರವಾಸೋದ್ಯಮ ವಿಭಾಗದ ಸುಮಾರು 150 ವಿದ್ಯಾರ್ಥಿಗಳಿಗೆ ಐತಿಹಾಸಿಕ ಮಹತ್ವವುಳ್ಳ ಸಂಗನಕಲ್ಲು ಪ್ರಾಗೈತಿಹಾಸಿಕ ತಾಣಕ್ಕೆ ಮಾರ್ಗದರ್ಶಿ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಚೀನ ಇತಿಹಾಸ, ಶಿಲಾಯುಗದ ಕುರುಹುಗಳು ಹಾಗೂ ಪರಿಸರದ ಬಗ್ಗೆ ನೇರ ಮಾಹಿತಿ ಪಡೆದುಕೊಂಡರು.

news_1790514628_2_937.webp

 

ಡಿಜಿಟಲ್ ತಂತ್ರಜ್ಞಾನ ಮತ್ತು ಎಐ ಕುರಿತು ಉಪನ್ಯಾಸ: ಕ್ಷೇತ್ರ ಭೇಟಿಯ ನಂತರ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಹೊಂಗಿರಣ’ ವೇದಿಕೆಯಲ್ಲಿ ವಿಚಾರ ಸಂಕಿರಣ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಶಶಿಕಾಂತ್ ಅವರು ‘ಪ್ರವಾಸೋದ್ಯಮವನ್ನು ಮರುರೂಪಿಸಲು ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ (ಎಐ)’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಪ್ರಸ್ತುತ ಆಧುನಿಕ ಯುಗದಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಡಿಜಿಟಲ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನೆರವಿನಿಂದ ಹೇಗೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ ಹಾಗೂ ಇದು ಪ್ರವಾಸಿಗರಿಗೆ ಯಾವ ರೀತಿ ನೆರವಾಗಲಿದೆ ಎಂಬುದನ್ನು ಅವರು ಸವಿಸ್ತಾರವಾಗಿ ವಿವರಿಸಿದರು.

news_1790514628_1_810.webp

 

ಸಂಗನಕಲ್ಲು ಮ್ಯೂಸಿಯಂ ದೇಶಕ್ಕೇ ಹೆಮ್ಮೆ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ ಅವರು ಮಾತನಾಡಿ, ಪ್ರವಾಸೋದ್ಯಮವು ಸಂಸ್ಕೃತಿಗಳ ವಿನಿಮಯ ಮತ್ತು ಆರ್ಥಿಕ ವಿಕಾಸಕ್ಕೆ ಹೇಗೆ ಪೂರಕವಾಗಿದೆ ಎಂಬುದರ ಕುರಿತು ಬೆಳಕು ಚೆಲ್ಲಿದರು.

ಬಳಿಕ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯದ ಅಹಿರಾಜ್ ಅವರು ಮಾತನಾಡಿ, ಸಂಗನಕಲ್ಲು ಪ್ರಾಗೈತಿಹಾಸಿಕ ತಾಣವು ಜಾಗತಿಕ ಮಟ್ಟದಲ್ಲೇ ಅಪಾರ ಮಹತ್ವವನ್ನು ಹೊಂದಿದೆ. ಬಳ್ಳಾರಿಯಲ್ಲಿರುವ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯವು ಇಡೀ ಭಾರತದಲ್ಲೇ ಪ್ರಾಗೈತಿಹಾಸಿಕ ಅಧ್ಯಯನ ಮತ್ತು ಸಂಶೋಧನಾ ದೃಷ್ಟಿಯಿಂದ ಸ್ಥಾಪಿಸಲಾದ ಅತ್ಯಂತ ಪ್ರಮುಖ ಹಾಗೂ ವಿಶಿಷ್ಟ ಮ್ಯೂಸಿಯಂ ಆಗಿದೆ ಎಂದು ಹೆಮ್ಮೆಯಿಂದ ತಿಳಿಸಿದರು.

news_1790514628_0_654.webp

 

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ರಾಬರ್ಟ್ ಬ್ರೂಸ್ ಫೂಟ್ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ, ಅಲ್ಲಿ ಪ್ರದರ್ಶಿಸಲಾಗಿರುವ ನವಶಿಲಾಯುಗದ ಅವಶೇಷಗಳು ಹಾಗೂ ಅಪರೂಪದ ಪುರಾತತ್ವ ಸಂಗ್ರಹಗಳನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ಶ್ರೀಹರಿ ಮಸನೂರು, ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸರಳಾದೇವಿ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

news_1790514628_4_276.webp

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ