LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ದೂರದರ್ಶನದಲ್ಲಿ ಯೋಗ ಸಪ್ತಾಹ ಯಶಸ್ವಿ

ಆಯುಷ್ ಇಲಾಖೆಯಿಂದ "ಯೋಗ ಸಂಗಮ ಪುರಸ್ಕಾರ" ಪ್ರದಾನ

ಬೆಂಗಳೂರು :  ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದಿಂದ ‘ಯೋಗ ಸಪ್ತಾಹ’ವನ್ನು ಆಚರಿಸಲಾಯಿತು. ಯಶಸ್ವಿಯಾಗಿ ಯೋಗ ಕಾರ್ಯಕ್ರಮಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಸಚಿವಾಲಯ ಪ್ರಶಂಶಿಸಿ "ಯೋಗ ಸಂಗಮ ಪತ್ರ" ನೀಡಿ ಗೌರವಿಸಿದೆ.



ಜೂನ್ 18ರಿಂದ 24ರವರೆಗೆ ಪ್ರತಿದಿನ ಸಂಜೆ 5 ಗಂಟೆಗೆ, ಬೆಂಗಳೂರು ದೂರದರ್ಶನದ ಆವರಣದಲ್ಲಿ, ಯೋಗ ಶಿಕ್ಷಕಿ ಪೂರ್ಣಿಮಾ ಕಂದಿ ಅವರು ದೈನಂದಿನ ಬದುಕಿಗೆ ಅಗತ್ಯವಾಗಿರುವ ವಿವಿಧ ಆಸನಗಳನ್ನು ಕಲಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಯೋಗದ ಮಹತ್ವ ಕುರಿತು ಅರಿವು ಮೂಡಿಸುವ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಲಾಯಿತು.



ಜೂನ್ 21ರಂದು ಯೋಗ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಅಖಿಲ ಭಾರತ ತಾಂತ್ರಿಕ ಪರಿಷತ್ತಿನ ಅಧ್ಯಕ್ಷ ಟಿ. ಜಿ. ಸೀತಾರಾಮ್ ಹಾಗೂ ಬೆಂಗಳೂರು ವಿ.ವಿ.ಐ.ಪಿ. ಉಪ ಆರಕ್ಷಕ ಆಯುಕ್ತರಾದ ಮಂಜುನಾಥ್ ಬಾಬು ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಪಿ. ಐ. ಬಿ. ಹೆಚ್ಚುವರಿ ಮಹಾನಿರ್ದೇಶಕರಾದ ಎಸ್. ಜಿ. ರವೀಂದ್ರ, ದೂರದರ್ಶನದ ಅಭಿಯಂತರ ಮಹಾನಿರ್ದೇಶಕಾದ ಹಾಗೂ ಕಚೇರಿ ಮುಖ್ಯಸ್ಥರಾದ ಎ.ಹನುಮಂತ್, ಆರ್. ವಿ. ಕಾಲೇಜಿನ ಪ್ರಾಂಶುಪಾಲರಾದ ಕೆ. ಎನ್. ಸುಬ್ರಮಣ್ಯ ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ