LIVE TV StateNationalPoliticsCrimeEntertainmentSportsEducationFINANCE & TAXATION
Districts

ಜಮೀನಿನ ದಾರಿ ವಿವಾದ ಹಿನ್ನೆಲೆ – ಯುವಕನ ಬರ್ಬರ ಹತ್ಯೆ

ಸುರಪುರ : ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿ ವಿಚಾರದ ಕುಟುಂಬದೊಳಗಿನ ಗಲಾಟೆ ಭೀಕರ ತಿರುವು ಪಡೆದಿದ್ದು, ಒಬ್ಬ ಯುವಕನ ಹತ್ಯೆಯಾಗಿ ಅಂತ್ಯಗೊಂಡ ದುರ್ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ನಡೆದಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕನನ್ನು ಪರಮೇಶಿ ತಂದೆ ಮಲ್ಲಣ್ಣ ಗಿಂಡಿ (27) ಎಂದು ಗುರುತಿಸಲಾಗಿದೆ.

ಜಮೀನಿನ ದಾರಿ ವಿಚಾರವಾಗಿ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ವೈಷಮ್ಯ ಕ್ಷುಲ್ಲಕ ಕಾರಣದಿಂದಾಗಿ , ನಂತರ ಕೊಲೆ ಮಾಡುವ ಹಂತಕ್ಕೆ  ತಲುಪಿದೆ. ಮಾರಕಾಸ್ತ್ರಗಳನ್ನು ಬಳಸಿಕೊಂಡು ಆರೋಪಿಗಳು ಪರಮೇಶಿ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



ಈ ಘಟನೆಯಲ್ಲಿ ಮೃತನ ತಮ್ಮನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಕೆಂಭಾವಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಈ ಘಟನೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಒದಗಿಸಲಾಗಿದೆ .

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ