LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಇಂದಿರಾ ಗಾಂಧಿ ವಸತಿ ಶಾಲೆಗೆ ಜಿ.ಪಂ ಸಿಇಒ ಭೇಟಿ

ಕವಿತಾಳ: ಪಟ್ಟಣ ಸಮೀಪದ  ವಟಗಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆ ಪ- ವರ್ಗ ವಸತಿ ಶಾಲೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ದಿಢೀರ್‌ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

 

ನಂತರ ವಸತಿ ಶಾಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಮಕ್ಕಳ ಊಟೋಪಚಾರದ ಬಗ್ಗೆ ರುಚಿ ಮತ್ತು ಶುಚಿ ಎರಡು ಇರುವಂತೆ ನೋಡಿಕೊಳ್ಳಬೇಕು ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಿ, ಹಾಗೆಯೇ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವಿರಲಿ ಎಂದು ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ನಿಲಯ ಪಾಲಕರಿಗೆ ಕಿವಿಮಾತು ಹೇಳಿದರು.

 

ವಸತಿ ನಿಲಯದಲ್ಲಿದ್ದ ರಾಶಿ-ರಾಶಿ ಪುಸ್ತಕಗಳನ್ನು ನೋಡಿದ ಸಿಇಒ ಈ ಪುಸ್ತಕಗಳನ್ನು ಇಲ್ಲಿ ಏಕೆ ಹಿರಿಸಿದ್ದಿರಿ ಎಂದು ಪ್ರಾಂಶುಪಾಲ ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತರಿಸಿದ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ವಿತರಣೆಮಾಡುವ ಸಲುವಾಗಿ ಇರಿಸಲಾಗಿದೆ ಎಂದರು. ಶಾಲೆ ಪ್ರಾರಂಭವಾಗಿ ಮೂರು ತಿಂಗಳ ಹೋದರು ಇನ್ನೂ ಯಾವಾಗ ಪುಸ್ತಕಗಳನ್ನ ವಿತರಣೆ ಮಾಡ್ತೀರಾ ಎಂದು ಪ್ರಾಂಶುಪಾಲರಿಗೆ ತರಾಟೆಗೆ ತೆಗೆದುಕೊಂಡರು.



ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುಸ್ತಕ ಸೇರಿದಂತೆ ಪಠ್ಯಪುಸ್ತಕ ಗಳನ್ನು ವಿತರಿಸಲಾಗುತ್ತಿದೆ. ಆದರೆ ತಮ್ಮ ನಿರ್ಲಕ್ಷದಿಂದ ಸರ್ಕಾರದ ಸವಲತ್ತು ಸದುಪಯೋಗವಾಗದಿರುವದರಿಂದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

 

ಈ ಸಂದರ್ಭದಲ್ಲಿ ಅಮರೇಶ ಯಾದವ, ಮಾನ್ವಿ ಟಿಎಚ್ಒ ಶರಣಬಸವರಾಜ,  ಪಿಡಿಓ  ತಿಮ್ಮಣ್ಣ, ತಾಪಂ ಎಡಿಗಳಾದ ಶಿವನಂದಾ, ಸೋಮನಗೌಡ ಉಪಸ್ಥಿತರಿದ್ದರು. ಪಾಮನಕಲ್ಲೂರುನ ಪ್ರಾಥಮಿಕ ಆರೋಗ್ಯ ಕೇಂದ್ರ, ಸರಕಾರಿ ಪ್ರೌಢಶಾಲೆ, ವಸತಿನಿಯಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ